alex Certify ಇಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಂದೂಡಿಕೆ

ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಡಿಸೆಂಬರ್ 6ರಂದು ನಿಗದಿಯಾಗಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ.

ಇನ್ನು ಎರಡು ವಾರದ ನಂತರ ಮುಂದಿನ ಸಭೆ ನಡೆಸುವ ನಿರೀಕ್ಷೆ ಇದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಇಂಡಿಯಾ’ ಮೈತ್ರಿಕೂಟದ ನಾಯಕರನ್ನು ಆಹ್ವಾನಿಸಿ ಸಭೆ ನಡೆಸಲು ಮುಂದಾಗಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಸಮಾಜವಾದಿ ಪಕ್ಷ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಸಭೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಎರಡು ವಾರಗಳ ನಂತರ ಸಭೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...