ನಾಳೆಯಿಂದ ಸೆಪ್ಟೆಂಬರ್ 27 ರವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು, ಭಾರತದ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ. ಈ ಏಕದಿನ ಸರಣಿಯಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ.
ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದ್ದು, ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾದೊಂದಿಗೆ ಎದುರಿಸಬೇಕಾಗಿದೆ. ಹಾಗಾಗಿ ಈ ಏಕದಿನ ಸರಣಿ ಎರಡು ತಂಡಕ್ಕೂ ತುಂಬಾ ಮುಖ್ಯವಾಗಿದೆ. ವಿಶ್ವಕಪ್ ಎಂದಾಕ್ಷಣ ಆಸ್ಟ್ರೇಲಿಯಾ ತಂಡ ಬಲಿಷ್ಟವಾಗಿಯೇ ಕಾಣುತ್ತದೆ. ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ ಇದಾಗಿದ್ದು, ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಾರೆ.