ನವದೆಹಲಿ: ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ ಮತ್ತು ಜಾಗತಿಕವಾಗಿ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಇಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಅವರು ಮಾಹಿತಿ ನೀಡಿದ್ದು, ದೇಶದಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಯನ್ನು ಉತ್ತೇಜಿಸಲು ವಿವಿಧ ಕ್ರಮಗಳನ್ನು ಪ್ರಾರಂಭಿಸಲಾಗಿದೆ, ಇದರಲ್ಲಿ ಅಂತರರಾಷ್ಟ್ರೀಯ ವಿಮಾನಯಾನ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು ಮತ್ತು ನಿರ್ವಹಣೆ, ದುರಸ್ತಿ ಮತ್ತು ಸೌಲಭ್ಯಗಳನ್ನು ಸ್ಥಾಪಿಸುವುದು ಸೇರಿವೆ ಎಂದು ಹೇಳಿದ್ದಾರೆ.
ವಿಮಾನಯಾನ ಕೇಂದ್ರಗಳ ಅಭಿವೃದ್ಧಿಗಾಗಿ ಸರ್ಕಾರವು ಅಂತರರಾಷ್ಟ್ರೀಯ ವಿಮಾನಯಾನ ಹಬ್ ಕಾರ್ಯತಂತ್ರವನ್ನು ಸಹ ರೂಪಿಸಿದೆ. ಆರ್‌ಸಿಎಸ್-ಉಡಾನ್ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಸರ್ಕಾರದ ಪರಿಗಣನೆಯಲ್ಲಿದೆ ಎಂದು ಹೇಳಿತಿಳಿಸಿದ್ದಾರೆ.