
“ಸುಡಾನ್ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ನಡೆಯುತ್ತಿದೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ಮತ್ತಷ್ಟು ಮಂದಿ ಇದೇ ದಾರಿಯಲ್ಲಿದ್ದಾರೆ. ನಮ್ಮ ಹಡಗುಗಳು ಮತ್ತು ವಿಮಾನಗಳು ಅವರನ್ನು ಮನೆಗೆ ಕರೆತರಲು ಸಜ್ಜಾಗಿವೆ. ಸುಡಾನ್ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಬದ್ಧವಾಗಿದೆ” ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.