ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಾಧನೆ ಮುಂದಿನ ರಣತಂತ್ರದ ಬಗ್ಗೆ ಜೂನ್ ಸಭೆಯಲ್ಲಿ ಚರ್ಚಿಸಲಾಗುವುದು.
ಜೂನ್ 1ರಂದು 7ನೇ ಹಾಗೂ ಕೊನೆ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ಮಹತ್ವ ಪಡೆದುಕೊಂಡಿದೆ.
ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯುವ ದಿನವಾದ ಜೂನ್ 1(ಶನಿವಾರ) ರಂದು ಸಭೆ ನಡೆಸಲಾಗುವುದು. ಚುನಾವಣಾ ಫಲಿತಾಂಶಗಳು ಪ್ರಕಟವಾಗುವ 4 ದಿನಗಳ ಮೊದಲು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಇಂಡಿಯಾ ಬ್ಲಾಕ್‌ನ ಎಲ್ಲಾ ಮೈತ್ರಿ ಪಾಲುದಾರರನ್ನು ಆಹ್ವಾನಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿನ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿಕೂಟದ ಮುಂದಿನ ಕ್ರಮಗಳನ್ನು ಪರಿಶೀಲಿಸಲು ಮತ್ತು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.