ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಮೇ 31ರವರೆಗೂ ವಿಮಾನ ಹಾರಾಟ ನಿರ್ಬಂಧವನ್ನು ವಿಸ್ತರಿಸಿ ನಾಗರಿಕ ವಿಮಾನಯಾನ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ.
ದೇಶದಲ್ಲಿ ಕೊರೋನಾ ಎರಡನೇ ಅಲೆಯಿಂದ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ. ತುರ್ತು ಮತ್ತು ಅಗತ್ಯ ಸೇವೆ ಹೊರತಾಗಿ ಉಳಿದೆಲ್ಲ ವಿದೇಶಿ ವಿಮಾನಗಳಿಗೆ ನಿರ್ಬಂಧವಿದೆ ಎಂದು ಹೇಳಲಾಗಿದೆ.