ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸುತ್ತಿವೆ. ಸದ್ಯ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಸದ್ಯ ದೆಹಲಿಗೆ ಪ್ರಯಾಣಿಸುವ ಅಂತಾರಾಷ್ಟ್ರೀಯ ಹಾಗೂ ದೇಶೀಯ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದೆ.
ವಿಮಾನಗಳ ಮೂಲಕ ದೆಹಲಿಗೆ ಬರುವ ಪ್ರಯಾಣಿಕರು ಆರೋಗ್ಯ ಸೇತು ಆಪ್ ನ್ನು ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಎಲ್ಲ ಪ್ರಯಾಣಿಕರ ಮಾದರಿ ಸಂಗ್ರಹಣೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ನ್ನು ಕಡ್ಡಾಯಗೊಳಿಸಲಾಗಿದೆ.
ಅಲ್ಲದೇ, ಕೊರೊನಾ ಹೆಚ್ಚಾಗಿ ಕಂಡು ಬರುತ್ತಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ರ್ಯಾಂಡಮ್ ಟೆಸ್ಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣ ತೊರೆಯಬೇಕು. ಈ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ.