alex Certify ದೇಶದ ಜನತೆಗೆ ಗುಡ್ ನ್ಯೂಸ್: ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆ, ಚೇತರಿಕೆ ಪ್ರಮಾಣ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಗುಡ್ ನ್ಯೂಸ್: ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆ, ಚೇತರಿಕೆ ಪ್ರಮಾಣ ಏರಿಕೆ

ನವದೆಹಲಿ: ದೇಶದಲ್ಲಿ 18,870 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲಿ 378 ಮಂದಿ ಸಾವು ಕಂಡಿದ್ದಾರೆ. ಚೇತರಿಕೆಯ ಪ್ರಮಾಣ ಶೇಕಡ 97.81 ರಷ್ಟಿದೆ.

ಭಾರತದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 2,82,560 ಕ್ಕೆ ಇಳಿದಿವೆ. ಇದು 194 ದಿನಗಳಲ್ಲಿ ಕಡಿಮೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 28,178 ಚೇತರಿಕೆ ಕಂಡಿದೆ, ಒಟ್ಟು ಚೇತರಿಕೆ ದರವು ಸುಮಾರು ಶೇಕಡ 97.81 ರಷ್ಟಿದ್ದು, 3,29,86,180 ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 4,47,751 ಕ್ಕೆ ಏರಿಕೆಯಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, ಸೆಪ್ಟೆಂಬರ್ 28 ರವರೆಗೆ 56,74,50,185 ಮಾದರಿಗಳನ್ನು  ಪರೀಕ್ಷಿಸಲಾಗಿದೆ. ಇವುಗಳಲ್ಲಿ 15,04,713 ಮಾದರಿಗಳನ್ನು ಮಂಗಳವಾರ ಪರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...