alex Certify BREAKING: ಮುಗ್ಗರಿಸಿದ ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ 6 ವಿಕೆಟ್ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಗ್ಗರಿಸಿದ ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ 6 ವಿಕೆಟ್ ಜಯ

ಸಿಡ್ನಿ: ಸಿಡ್ನಿ ಕ್ರಿಕೆಟ್ ಗ್ರೌಂಡ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ.

ಬಾರ್ಡರ್ –ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಈ ಮೂಲಕ 10 ವರ್ಷಗಳ ನಂತರ ಭಾರತದ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿಕೊಂಡ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 185 ರನ್,  ಆಸ್ಟ್ರೇಲಿಯಾ 181 ರನ್ ಗಳಿಸಿತ್ತು. 4 ರನ್ ಮುನ್ನಡೆ ಪಡೆದ ಟೀಂ ಇಂಡಿಯಾ ಎರಡನೇ ಇನಿಂಗ್ಸ್ ನಲ್ಲಿ 157 ರನ್ ಗಳಿಸಿತು. 162 ರನ್ ಗುರಿ ಪಡೆದ ಆಸ್ಟ್ರೇಲಿಯಾ 27 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...