ಚೆನ್ನೈ: ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಸೋಂಕು ಹಾಗೂ ಶ್ವಾಸಕೋಶತ ತೊಂದರೆಯಿಂದ ಗಂಭೀರ ಸ್ಥಿತಿಗೆ ತಲುಪಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಎರಡು ದಿನಗಳಲ್ಲಿ ಚೇತರಿಕೆ ಕಂಡಿದ್ದ ಎಸ್.ಪಿ.ಬಿ. ಬಳಿಕ ಮತ್ತೆ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಎಂಜಿಎಂ ಆಸ್ಪತ್ರೆಯ ಸ್ಪೆಷಲ್ ವಾರ್ಡ್ ನಲ್ಲಿ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.