alex Certify ಅಟಲ್ ಸುರಂಗ ಮಾರ್ಗದಲ್ಲಿ ಸಂಚರಿಸಿ ಫೋಟೋ ಹಂಚಿಕೊಂಡ ನಟಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಟಲ್ ಸುರಂಗ ಮಾರ್ಗದಲ್ಲಿ ಸಂಚರಿಸಿ ಫೋಟೋ ಹಂಚಿಕೊಂಡ ನಟಿ….!

ಇತ್ತೀಚೆಗಷ್ಟೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ವಿಶ್ವದ ಅತಿ ಉದ್ದನೆಯ ಸುರಂಗ ಮಾರ್ಗವನ್ನು ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಈ ಸುರಂಗ ಮಾರ್ಗದಲ್ಲಿ ಚಲಿಸಿದರೆ ಮನಾಲಿ ಮತ್ತು ಲೇಹ್ ನಡುವೆ 46 ಕಿ.ಮೀ. ಕಡಿಮೆ ಆಗಲಿದೆ. ಹೀಗಾಗಿ ಅನೇಕ ಪ್ರಯಾಣಿಕರಿಗೆ ಇದು ಅನುಕೂಲ ಆಗುತ್ತಿದೆ. ಈ ಸುರಂಗ ಮಾರ್ಗದಲ್ಲಿ ನಟಿ ಪ್ರಣಿತಾ ಪ್ರಯಾಣ ಮಾಡಿದ್ದಾರೆ. ಅಲ್ಲಿನ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೌದು, ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್ ಸದ್ಯ ಬಾಲಿವುಡ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯ ಹಂಗಮಾ-2 ಸಿನಿಮಾದಲ್ಲಿ ನಟಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರೀಕರಣಕ್ಕೆಂದು ಮನಾಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ನಟಿ ಪ್ರಣೀತಾ ಅಟಲ್ ಟನಲ್ ಬಳಿ ಸಾಕಷ್ಟು ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ಈ ಫೋಟೋಗಳು ವೈರಲ್ ಆಗಿವೆ.

ಹಾಗೆಯೇ ಈ ಟನಲ್‌ನಲ್ಲಿ ಪ್ರಯಾಣ ಬೆಳೆಸಿದ್ದು ಖುಷಿಯಾಗಿದೆ. ಈ ಮಾರ್ಗದಲ್ಲಿ ಪ್ರಯಾಣ ಬೆಳೆಸಿದರೆ ಸಾಕಷ್ಟು ಸಮಯ ಉಳಿಯುತ್ತಿದೆ ಎಂದು ಹೇಳಿದ್ದಾರೆ. ಈ ಉದ್ದದ ಟನಲ್ ಇದೀಗ ಪ್ರವಾಸಿ ತಾಣವಾಗಿದೆ. ಅನೇಕರು ಇಲ್ಲಿಗೆ ಬಂದು ಫೋಟೋ ತಗೆಸಿಕೊಳ್ಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...