
ರಿಯಾಸಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೂರು ಮಕ್ಕಳ ತಾಯಿ ಮೇಲೆ ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರದ ವಿಡಿಯೋ ಮಾಡಿದ ಪಾಪಿ ನಂತ್ರ ಕಿರುಕುಳ ನೀಡಲು ಶುರು ಮಾಡಿದ್ದಾರೆ. ಸತತ ಎರಡು ತಿಂಗಳು ದೈಹಿಕ ಹಿಂಸೆ ನೀಡಿದ್ದಾರೆ.
ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಎರಡು ತಿಂಗಳ ಹಿಂದೆ ವಿಡಿಯೋ ಮಾಡಿದ ಪಾಪಿಗಳು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಅತ್ಯಾಚಾರವೆಸಗಿದ್ದಾರೆ. ಶುಕ್ರವಾರ ಪೀಡಿತೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ.
ಆರೋಪಿಗಳು ನಾಪತ್ತೆಯಾಗಿದ್ದು, ಅವ್ರ ಪತ್ತೆ ಕಾರ್ಯ ನಡೆಯುತ್ತಿದೆ.