ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಎನ್.ಡಿ.ಎ. ಅಂಗಪಕ್ಷ ಶಿರೋಮಣಿ ಅಕಾಲಿದಳ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಾಕ್ ನೀಡಿದೆ.
ಸಂಸತ್ತಿನಲ್ಲಿ ಮಂಡಿಸಲಾಗಿರುವ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿದಳದ ನಾಯಕಿ ಹರ್ ಸಿಮ್ರತ್ ಕೌರ್ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಮಸೂದೆಗಳು ರೈತ ವಿರೋಧಿ ಎಂದು ಶಿರೋಮಣಿ ಅಕಾಲಿದಳ ಆರೋಪಿಸಿದ್ದು, ಕೃಷಿ ಕ್ಷೇತ್ರದಲ್ಲಿ ಕಾರ್ಪೊರೇಟ್ ವಲಯಕ್ಕೆ ಮಣೆ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದೆ. ಅಲ್ಲದೆ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ತನ್ನ ಪಕ್ಷದ ಸಂಸದರಿಗೆ ವಿಪ್ ಜಾರಿಮಾಡಿದೆ.