ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಿಬಿಐ ಅಧಿಕಾರಿಗಳು, ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮುಂಬೈ ಹಾಗೂ ನಾಗ್ಪುರ್ ನಲ್ಲಿರುವ ಅನಿಲ್ ದೇಶ್ ಮುಖ್ ಅವರ ನಿವಾಸ ಸೇರಿದಂತೆ ನಾಲ್ಕು ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಏಪ್ರಿಲ್ 26 ಸೋಮವಾರದಿಂದ ಎರಡು ದಿನ ಸರ್ಕಾರಿ ರಜೆ ಘೋಷಣೆ
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅನಿಲ್ ದೇಶ್ ಮುಖ್ ವಿರುದ್ಧ 100 ಕೋಟಿ ರೂ. ಭ್ರಷ್ಟಾಚಾರ ಆರೋಪ ಮಾಡಿದ್ದರು. ಮುಂಬೈನ 1750 ಬಾರ್ ಹಾಗೂ ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಹಣ ವಸೂಲಿ ಮಾಡುವಂತೆ ಪೊಲೀಸ್ ಅಧಿಕಾರಿಯಾಗಿದ್ದ ಸಚಿನ್ ವಾಜೆ ಗೆ ಟಾರ್ಗೆಟ್ ನೀಡಿದ್ದರು ಎಂದು ಪರಮ್ ಬೀರ್, ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದು ಸಿಬಿಐಗೆ ವಹಿಸಲಾಗಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್ ರಾಜೀನಾಮೆ ನೀಡಿದ್ದರು.