alex Certify ಅನಿಲ ಸೋರಿಕೆ ಪ್ರಕರಣ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿಲ ಸೋರಿಕೆ ಪ್ರಕರಣ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಅನಿಲ ಸೋರಿಕೆ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಮಂದಿಗೆ ಪ್ರಜ್ಞೆ ತಪ್ಪಿದೆ. 800ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಜನರು ಸಂತಾಪ ಸೂಚಿಸಿದ್ದಾರೆ.

ಈ ಮಧ್ಯೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೆರವಿನ ಘೋಷಣೆ ಮಾಡಿದ್ದಾರೆ. ಅನಿಲ ಸೋರಿಕೆಯಿಂದಾಗಿ ಮೃತ ವ್ಯಕ್ತಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಅಲ್ಲದೆ ವೆಂಟಿಲೇಟರ್‌ನಲ್ಲಿರುವ ಜನರಿಗೆ 10 ಲಕ್ಷ ರೂಪಾಯಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರದೇಶದ ಜನರಿಗೆ 25 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಜಗನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...