ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಗೆ ಶೀಘ್ರದಲ್ಲೇ ಮಾನ್ಯತೆ ಸಿಗುವ ಸಾಧ್ಯತೆ ಇದೆ. ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ವಿಸ್ತರಿಸುವ ಚುನಾವಣಾ ಆಯೋಗದ ಪ್ರಸ್ತಾವನೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ.
ಅನಿವಾಸಿ ಭಾರತೀಯರೂ ಭಾರತದ ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಕಾರಣಕ್ಕೆ ಅವರುಗಳಿಗೆ ಅಂಚೆ ಮತದಾನದ ಅವಕಾಶ ಕಲ್ಪಿಸಿಕೊಡುವ ಸಲುವಾಗಿ 1961 ರ ಚುನಾವಣಾ ಪ್ರಕ್ರಿಯೆ ನಿಯಮಗಳಿಗೆ ತಿದ್ದುಪಡಿ ತರಲು ಚುನಾವಣಾ ಆಯೋಗ, ಕೇಂದ್ರ ಕಾನೂನು ಇಲಾಖೆಗೆ ಕಳೆದ ವರ್ಷ ಪತ್ರ ಬರೆದು ಮನವಿ ಮಾಡಿತ್ತು.
ಕಾನೂನು ಇಲಾಖೆ ಈ ಕುರಿತು ಅಭಿಪ್ರಾಯ ತಿಳಿಸುವಂತೆ ವಿದೇಶಾಂಗ ವ್ಯವಹಾರಗಳ ಇಲಾಖೆಗೆ ತಿಳಿಸಿದ್ದು, ಇದೀಗ ಗ್ರೀನ್ ಸಿಗ್ನಲ್ ಸಿಕ್ಕಿರುವ ಕಾರಣ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಅನಿವಾಸಿ ಭಾರತೀಯರಿಗೆ ವಿದ್ಯುನ್ಮಾನ ಅಂಚೆ ಮತದಾನಕ್ಕೆ ಅವಕಾಶ ಸಿಗುವ ನಿರೀಕ್ಷೆಯಿದೆ.