ಬೆಂಗಳೂರು, ಮುಂಬೈ ಮತ್ತು ಸೂರತ್ ಮಹಾನಗರಗಳಲ್ಲಿ ಅಪ್ರಾಪ್ತ ಬಾಲಕಿಯರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಬಾಂಗ್ಲಾ ಮೂಲದವನು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಮಹಿಳೆ ಸೇರಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ.
ಮುಖ್ಯ ಆರೋಪಿ ಮೊಹಮ್ಮದ್ ನಜ್ರುಲ್ ಖಾನ್, ಅಪ್ರಾಪ್ತ ಬಾಲಕಿಯನ್ನು ನಂಬಿಸಿ, ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದಿದ್ದ. ನಂತ್ರ ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿದ್ದ. ಮೊದಲು ಆರೋಪಿ ಬೆಂಗಳೂರಿಗೆ ಬಂದಿದ್ದ. ನಂತ್ರ ಮುಂಬೈ, ಸೂರತ್ ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿದ್ದ. ದಾಳಿ ವೇಳೆ 7 ಮಂದಿಯನ್ನು ಬಂಧಿಸಲಾಗಿದೆ.
ಆರೋಪಿ ಮೊಹಮ್ಮದ್ ಪತ್ನಿ ಕೂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಾಳೆ ಎನ್ನಲಾಗಿದೆ. ಆಕೆ ಸದ್ಯ ಬಾಂಗ್ಲಾ ದೇಶದಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಎಲ್ಲ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೀಡಿತೆ ಬಾಲಕಿಯನ್ನು ಸುರಕ್ಷಿತ ಸ್ಥಳದಲ್ಲಿಡಲಾಗಿದೆ.