ನವದೆಹಲಿ: ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ಅಸ್ಸಾಂ ಮುಖ್ಯಮಂತ್ರಿಯಾಗಲಿದ್ದಾರೆಯೇ? ಹೀಗೊಂದು ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಇದಕ್ಕೆ ಇನ್ನಷ್ಟು ಪುಷ್ಠಿ ನೀಡುತ್ತಿದೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಹೇಳಿಕೆ.
ಮಾಜಿ ಸಿಜೆಐ ರಂಜನ್ ಗೊಗೊಯಿ ಮುಂಬರುವ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸಿಎಂ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ತರುಣ್ ಗೊಗೋಯಿ ಹೇಳಿದ್ದಾರೆ.
ಬಿಜೆಪಿ ಪಟ್ಟಿಯಲ್ಲಿ ರಂಜನ್ ಹೆಸರು ಇದೆ. ಈ ಬಗ್ಗೆ ಕೆಲ ಮೂಲಗಳಿಂದ ನನಗೆ ಮಾಹಿತಿ ಬಂದಿದೆ. ಈಗಾಗಲೇ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ತೀರ್ಪು ನೀಡಿದ ಬಳಿಕ ರಂಜನ್ ಬಿಜೆಪಿ ನಾಯಕರ ಫೇವರಿಟ್. ಹೀಗಾಗಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು. ಎಲ್ಲವೂ ಬಿಜೆಪಿ ರಾಜಕೀಯ. ಹೀಗಾಗಿ ಮುಂಬರುವ ಅಸ್ಸಾಂ ಚುನಾವಣೆಯಲ್ಲಿ ರಂಜನ್ ಗೊಗೊಯಿ ಅಸ್ಸಾಂ ಸಿಎಂ ಆಗಿ ಆಯ್ಕೆಯಾದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.