alex Certify ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ರೆ 7 ವರ್ಷದವರೆಗೆ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ರೆ 7 ವರ್ಷದವರೆಗೆ ಶಿಕ್ಷೆ

ಕೊರೊನಾ ವೈರಸ್  ಮಧ್ಯೆ ಆರೋಗ್ಯ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವವರ ಬಗ್ಗೆ ಮೋದಿ ಸರ್ಕಾರ ಈಗ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬುಧವಾರ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. 3 ತಿಂಗಳಿಂದ ಏಳು ವರ್ಷಗಳವರೆಗೆ ಶಿಕ್ಷೆ ವಿಧಿಸಲಾಗುವುದು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಅನೇಕ ಕಡೆ ವೈದ್ಯರು, ಆರೋಗ್ಯ ಕಾರ್ಯಕರ್ತೆಯರ ಮೇಲೆ ದಾಳಿ ನಡೆಯುತ್ತಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ. ಅವ್ರ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರಿಗೆ ಜಾಮೀನು ಸಿಗುವುದಿಲ್ಲ. ತನಿಖೆ 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ. 1 ವರ್ಷದೊಳಗೆ ತೀರ್ಪು ಬರಲಿದೆ.  ಶಿಕ್ಷೆಯು 3 ತಿಂಗಳಿಂದ 5 ವರ್ಷಗಳವರೆಗೆ ಇರಬಹುದು ಎಂದಿದ್ದಾರೆ.

ಇದಲ್ಲದೆ ಗಂಭೀರ ಪ್ರಕರಣಗಳಲ್ಲಿ 6 ತಿಂಗಳಿಂದ 7 ವರ್ಷಗಳವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ. ಗಂಭೀರ ಪ್ರಕರಣಗಳಲ್ಲಿ 50 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...