alex Certify ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು HDD ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು HDD ಸಲಹೆ

ಲಡಾಖ್ ಸಂಘರ್ಷ ಆತಂಕಕಾರಿ, ಪ್ರಧಾನಿ, ರಕ್ಷಣಾ ಸಚಿವರು ಸ್ಪಷ್ಟ ಮಾಹಿತಿ ನೀಡಬೇಕು: ದೇವೇಗೌಡ- Kannada Prabha

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ರಾಜ್ಯದಲ್ಲಿ ಬುಧವಾರದಂದು 23 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ, ಆಕ್ಸಿಜನ್ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಸಕಾಲಕ್ಕೆ ಆಕ್ಸಿಜನ್ ಸಿಗದಿರುವುದರಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಾಹನ ಮಾಲೀಕರೇ ಎಚ್ಚರ: ಫುಟ್ಪಾತ್ ಮೇಲೆ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಕೊರೊನಾ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ದೃಷ್ಟಿಯಿಂದ ಅವರುಗಳಿಗೆ ವಿಮಾ ಸೌಲಭ್ಯ ನೀಡಬೇಕು ಎಂದು ಹೇಳಿರುವ ದೇವೇಗೌಡರು, ತಂತ್ರಜ್ಞರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಮೂಲಕ ಸೋಂಕಿತರ ನೆರವಿಗೆ ಧಾವಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...