alex Certify ಇತ್ತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಡಾನ್ಸ್: ಅತ್ತ ಅಸ್ಸಾಂ ನಲ್ಲಿ ಸ್ಥಳೀಯರೊಂದಿಗೆ ಹೆಜ್ಜೆ ಹಾಕಿದ ಪ್ರಿಯಾಂಕಾ – ವೈರಲ್ ಆಯ್ತು ಅಣ್ಣ-ತಂಗಿ ಡಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತ್ತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಡಾನ್ಸ್: ಅತ್ತ ಅಸ್ಸಾಂ ನಲ್ಲಿ ಸ್ಥಳೀಯರೊಂದಿಗೆ ಹೆಜ್ಜೆ ಹಾಕಿದ ಪ್ರಿಯಾಂಕಾ – ವೈರಲ್ ಆಯ್ತು ಅಣ್ಣ-ತಂಗಿ ಡಾನ್ಸ್

ಚೆನ್ನೈ: ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿದ್ಯಾರ್ಥಿಗಳೊಂದಿಗೆ ಡಾನ್ಸ್ ಮಾಡಿ ಸಂಭ್ರಮಿಸಿದರೆ, ಅತ್ತ ಸಹೋದರಿ ಪ್ರಿಯಾಂಕಾ ಗಾಂಧಿ ಅಸ್ಸಾಂ ನಲ್ಲಿ ಸ್ಥಳೀಯ ಮಹಿಳೆಯರೊಂದಿಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ತೊಡಗಿರುವ ರಾಹುಲ್ ಗಾಂಧಿ ಮುಲಾಗುಮುದಬ್ ನ ಸೇಂಟ್ ಜೋಸೆಫ್ಸ್ ಮೆಟ್ರಿಕ್ಯೂಲೇಷನ್ ಸ್ಕೂಲ್ ವಿದ್ಯಾರ್ಥಿಗಳ ಜೊತೆ ವೇದಿಕೆ ಮೇಲೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ರಾಹುಲ್ ಗೆ ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದು ವಿಶೇಷವಾಗಿತ್ತು.

ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ: ಪಲಿಮಾರು ಶ್ರೀಗಳಿಗೆ ಸಿದ್ದರಾಮಯ್ಯ ತಿರುಗೇಟು

ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, ವಿದ್ಯಾರ್ಥಿಗಳು ನೀಡಿದ ಕೆಲ ಸವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಓರ್ವ ವಿದ್ಯಾರ್ಥಿ ವೇದಿಕೆ ಮೇಲೆ ರಾಹುಲ್ ಗಾಂಧಿಯವರಿಗೆ ಪುಶ್ ಅಪ್ಸ್ ಮಾಡುವಂತೆ ಸವಾಲು ಹಾಕಿದ್ದು, ಇದನ್ನು ಸ್ವೀಕರಿಸಿದ ರಾಹುಲ್ ತಕ್ಷಣ ಪುಶ್ ಅಪ್ಸ್ ಮಾಡಿದ್ದು ಅಚ್ಚರಿಗೆ ಕಾರಣವಾಯಿತು.

ಇನ್ನೊಂದೆಡೆ ಅಸ್ಸಾಂ ನ ಲಕ್ಕಿಂಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಥಳೀಯರೊಂದಿಗೆ ಜುಮುರ್ ಡಾನ್ಸ್ ಗೆ ಹೆಜ್ಜೆಹಾಕಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಅಣ್ಣ-ತಂಗಿ ಡ್ಯಾನ್ಸ್ ಭಾರಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...