alex Certify ಇಲ್ಲಿದೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ ಎರಡು ಮೂರು ದಿನಗಳಿಗೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 94,372 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ ಒಂದೇ ದಿನದಲ್ಲಿ 94,372 ಜನರಲ್ಲಿ ಕೊವಿಡ್ ವೈರಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,54,357ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,114 ಜನರು ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 78,586ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,73,175 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 36,24,197 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 10,71,702 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 37,02,596 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...