ನವದೆಹಲಿ: ಕೊರೊನಾ ಮಹಾಮಾರಿ ಅಟ್ಟಹಾಸ ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 70,589 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 61 ಲಕ್ಷ ಗಡಿ ದಾಟಿದೆ.
ಇದೀಗ ದೇಶದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ ದೇಶದಲ್ಲಿ 776 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಹೀಗಾಗಿ ಕಳೆದ ಒಂದು ದಿನಕ್ಕೆ ಹೋಲಿಸಿದರೆ ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 96,318ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ 9,47,576 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 51,01,398 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 11,42,811 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 7,31,10,041 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.