ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದರೂ ಎರಡನೇ ಅಲೆಯ ಆತಂಕ ಇದ್ದೇ ಇದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೆ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬಂದರೂ ಆಶ್ಚರ್ಯ ಪಡಬೇಕಿಲ್ಲ.
ಹೌದು, ಕೆಲವೊಂದು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಬೆನ್ನಲ್ಲೇ ಲಾಕ್‌ಡೌನ್ ಮಾತುಗಳು ಕೇಳಿ ಬರುತ್ತಿದೆ. ಸೋಂಕಿನ ಪ್ರಮಾಣ ಹೆಚ್ಚಿದ್ದ ರಾಜ್ಯಗಳಲ್ಲಿ ಮಹಾರಾಷ್ಟ್ರ ಕೂಡ ಒಂದು. ಇಲ್ಲಿಯೂ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಳವಾಗುತ್ತಿದೆ. ಹೀಗಾಗಿ ಲಾಕ್‌ಡೌನ್ ಚಿಂತನೆಗಳು ನಡೆಯುತ್ತಿವೆ.
ಇನ್ನು ಈ ಕುರಿತು ಮಾತನಾಡಿರುವ ಅಲ್ಲಿನ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಸಾಲು ಸಾಲು ಹಬ್ಬಗಳಲ್ಲಿ ಜನ ಮುನ್ನೆಚ್ಚರಿಕಾ ಕ್ರಮ ಪಾಲಿಸಿಲ್ಲ. ಹೀಗಾಗಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಪರಿಸ್ಥಿತಿಯನ್ನು ಅವಲೋಕನ ಮಾಡಿದ ನಂತರ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇನ್ನು ಈವರೆಗೆ ಲಾಕ್‌ಡೌನ್ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.