ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಈವರೆಗೆ 14 ಮೃತದೇಹಗಳು ಪತ್ತೆಯಾಗಿವೆ.
ಅವಶೇಷಗಳ ಅಡಿಯಲ್ಲಿ ಸಿಲುಕಿರುವ 15 ಜನರನ್ನು ರಕ್ಷಣೆ ಮಾಡಲಾಗಿದ್ದು, 14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕರ್ಣಪ್ರಯಾಗ್ ಮಾರ್ಗದಲ್ಲಿ 7 ಹಾಗೂ ತಪೋವನ ಪ್ರದೇಶದಿಂದ 3 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ವೃದ್ಧ ಸಾವು
ತಪೋವನದ ಸುರಂಗದಲ್ಲಿ ಸಿಲುಕಿದ್ದ 12 ಜನರನ್ನು ರಕ್ಷಿಸಲಾಗಿದೆ. ಈವರೆಗೆ ಒಟ್ಟು 30 ಜನರನ್ನು ರಕ್ಷಿಸಲಾಗಿದೆ. ರೈನಿ ವಿದ್ಯುತ್ ಯೋಜನೆ ಸಂಪೂರ್ಣ ಹಾನಿಯಾಗಿದ್ದು, ಸುರಂಗಗಳ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. 170 ಜನರು ಕಣ್ಮರೆಯಾಗಿರುವ ಬಗ್ಗೆ ಮಾಹಿತಿಯಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಮೋಲಿ ಪೊಲೀಸರು ಮಾಹಿತಿ ನೀಡಿದ್ದಾರೆ.