ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂಬುದು ಗೊತ್ತಿರುವ ಸಂಗತಿಯೇ. ಇದರ ಮಧ್ಯೆ ತಲೆದೋರಿರುವ ಕೊರೊನಾ ಮಹಾಮಾರಿಯಿಂದಾಗಿ ಉದ್ಯೋಗದಲ್ಲಿರುವವರೂ ಸಹ ಕೆಲಸ ಕಳೆದುಕೊಳ್ಳುವಂತಾಗಿದೆ.
ಜೊತೆಗೆ ಬಹಳಷ್ಟು ಉದ್ಯೋಗಾಕಾಂಕ್ಷಿಗಳು ಕೆಲಸ ಸಿಕ್ಕರೆ ಸಾಕೆಂಬ ಕಾರಣಕ್ಕೆ ತಾವು ಕಲಿತ ವಿದ್ಯೆಗೂ ಮಾಡುವ ಕೆಲಸಕ್ಕೂ ಸಂಬಂಧವಿಲ್ಲದಿದ್ದರೂ ಅರ್ಜಿ ಸಲ್ಲಿಸುತ್ತಾರೆ. ನಿರುದ್ಯೋಗ ಸಮಸ್ಯೆ ದೇಶದ ಎಲ್ಲ ರಾಜ್ಯಗಳಲ್ಲೂ ಪೆಡಂಭೂತವಾಗಿ ಕಾಡುತ್ತಿದೆ.
ಇದಕ್ಕೆ ಉದಾಹರಣೆ ಎಂಬಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 8,575 ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಈವರೆಗೆ ಬರೋಬ್ಬರಿ 3,23,690 ಮಂದಿ ಆನ್ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ.