alex Certify ಎಂಟೂವರೆ ಸಾವಿರ ಹುದ್ದೆಗಳಿಗೆ 3 ಲಕ್ಷಕ್ಕೂ ಅಧಿಕ ಮಂದಿಯಿಂದ ಅರ್ಜಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಟೂವರೆ ಸಾವಿರ ಹುದ್ದೆಗಳಿಗೆ 3 ಲಕ್ಷಕ್ಕೂ ಅಧಿಕ ಮಂದಿಯಿಂದ ಅರ್ಜಿ…!

Job vacancy at IDPC - Drug Policy Network SEE

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂಬುದು ಗೊತ್ತಿರುವ ಸಂಗತಿಯೇ. ಇದರ ಮಧ್ಯೆ ತಲೆದೋರಿರುವ ಕೊರೊನಾ ಮಹಾಮಾರಿಯಿಂದಾಗಿ ಉದ್ಯೋಗದಲ್ಲಿರುವವರೂ ಸಹ ಕೆಲಸ ಕಳೆದುಕೊಳ್ಳುವಂತಾಗಿದೆ.

ಜೊತೆಗೆ ಬಹಳಷ್ಟು ಉದ್ಯೋಗಾಕಾಂಕ್ಷಿಗಳು ಕೆಲಸ ಸಿಕ್ಕರೆ ಸಾಕೆಂಬ ಕಾರಣಕ್ಕೆ ತಾವು ಕಲಿತ ವಿದ್ಯೆಗೂ ಮಾಡುವ ಕೆಲಸಕ್ಕೂ ಸಂಬಂಧವಿಲ್ಲದಿದ್ದರೂ ಅರ್ಜಿ ಸಲ್ಲಿಸುತ್ತಾರೆ. ನಿರುದ್ಯೋಗ ಸಮಸ್ಯೆ ದೇಶದ ಎಲ್ಲ ರಾಜ್ಯಗಳಲ್ಲೂ ಪೆಡಂಭೂತವಾಗಿ ಕಾಡುತ್ತಿದೆ.

ಇದಕ್ಕೆ ಉದಾಹರಣೆ ಎಂಬಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 8,575 ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಈವರೆಗೆ ಬರೋಬ್ಬರಿ 3,23,690 ಮಂದಿ ಆನ್ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...