ಸದ್ಯದಲ್ಲೇ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷಗಳು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಗೇರಲು ಭಾರಿ ತಯಾರಿ ನಡೆಸುತ್ತಿವೆ. ಅದರಲ್ಲೂ ಆಡಳಿತರೂಢ ಎಐಎಡಿಎಂಕೆ ಒಂದು ಹೆಜ್ಜೆ ಮುಂದೆಯೇ ಇದೆ ಎನ್ನಬಹುದು.
ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದ್ದು, ಇದೀಗ ಚುನಾವಣೆಯಲ್ಲಿ ಸ್ಪರ್ಧಿಸಬಯಸುವ ಪಕ್ಷದ ಆಕಾಂಕ್ಷಿಗಳಿಂದ ಎಐಎಡಿಎಂಕೆ ಅರ್ಜಿ ಆಹ್ವಾನಿಸಿದೆ. ತಮಿಳುನಾಡಿನಲ್ಲಿ ಅರ್ಜಿ ಸಲ್ಲಿಸುವವರು 15 ಸಾವಿರ ರೂ. ಹಾಗೂ ಪುದುಚೇರಿಯಲ್ಲಿ ಅರ್ಜಿ ಸಲ್ಲಿಸುವವರು 5 ಸಾವಿರ ರೂ. ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಚುನಾವಣೆ ಹೊಸ್ತಿಲಲ್ಲೇ ‘ದೀದಿ’ ಸರ್ಕಾರದಿಂದ ಮಹತ್ವದ ಘೋಷಣೆ
ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಶಿಕಲಾ ಬಿಡುಗಡೆಯಾದ ಬಳಿಕ ಚುನಾವಣಾ ಕಣ ರಂಗೇರಿದೆ. ಶಶಿಕಲಾ ಹೊಸ ಪಕ್ಷ ಸ್ಥಾಪಿಸಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಾರಾ ಅಥವಾ ಎಐಎಡಿಎಂಕೆ ಯನ್ನು ಪುನಃ ವಶಕ್ಕೆ ಪಡೆಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.