alex Certify ಎಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಪರಾಭವಗೊಂಡ ನಂತರ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಯಾವುದೇ ಕಾರಣಕ್ಕೂ ತಾವು ಮತ್ತೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲವೆಂದು ತಿಳಿಸಿದ್ದರು.

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಪಕ್ಷದ ಹಿರಿಯ ನಾಯಕರು ನಿರಂತರವಾಗಿ ಮನವೊಲಿಸಲು ಮುಂದಾಗಿದ್ದರೂ ಸಹ ರಾಹುಲ್ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರು. ಆ ಬಳಿಕ ಸೋನಿಯಾ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.

ಇದೀಗ ಎಐಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆಂಬ ಮಾತುಗಳು ಕೇಳಿಬಂದಿದ್ದವು. ರಾಹುಲ್ ಗಾಂಧಿ ಈಗ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ತಾವು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...