ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,407 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,56,923ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 89 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,435ಕ್ಕೆ ಏರಿಕೆಯಾಗಿದೆ.
ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ
ಇನ್ನು ದೇಶದಲ್ಲಿ 1,73,413 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,08,26,075 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,031 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆಯೊಂದೇ ದಿನ 7,75,631 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 21,91,78,908 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 1,66,16,048 ಜನರಿಗೆ ಲಸಿಕೆ ಹಾಕಲಾಗಿದೆ.