ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗ್ಲೇ ಆರೋಗ್ಯ ಸಚಿವಾಲಯ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಸಾವಿನ ಪ್ರಮಾಣ ತೀರಾ ಕಡಿಮೆ.
ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ, ಕೊರೊನಾದ ಸಾವಿನ ಪ್ರಮಾಣ ಶೇಕಡಾ 1.93 ಕ್ಕೆ ತಲುಪಿದೆ. ಕೊರೊನಾ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 944 ಜನರು ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ದೇಶದಲ್ಲಿ ಈವರೆಗೆ 49,980 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 156 ದಿನಗಳಲ್ಲಿ 50,000 ಜನರು ಕೊರೊನಾದಿಂದ ಸಾವನ್ನಪ್ಪಿದ್ದರೆ, ಅಮೆರಿಕದಲ್ಲಿ 23 ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬ್ರೆಜಿಲ್ ನಲ್ಲಿ 95 ದಿನಗಳಲ್ಲಿ 50 ಸಾವಿರ ಜನರು ಮತ್ತು ಮೆಕ್ಸಿಕೊದಲ್ಲಿ 141 ದಿನಗಳಲ್ಲಿ 50 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕ್ಷಿಪ್ರ ಕೊರೊನಾ ಪರೀಕ್ಷೆಯಿಂದಾಗಿ ಕೊರೊನಾ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರ್ತಿದೆ. ಆದರೂ ಭಾರತದಲ್ಲಿ ಚೇತರಿಕೆಯ ಪ್ರಮಾಣವು ಸಾಕಷ್ಟು ಸುಧಾರಣೆಯನ್ನು ಕಾಣುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.