alex Certify ಒಂದೇ ದಿನದಲ್ಲಿ 11,288 ಸೋಂಕಿತರು ಗುಣಮುಖ: 15 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 11,288 ಸೋಂಕಿತರು ಗುಣಮುಖ: 15 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,510 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 106 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,157ಕ್ಕೆ ಏರಿಕೆಯಾಗಿದೆ.

ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ…?

ಇನ್ನು ದೇಶದಲ್ಲಿ 1,68,627 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,86,457 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,288 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,43,01,266 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...