alex Certify ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ: ಕೊರೊನಾಗೆ ಬಲಿಯಾದವರ ಸಂಖ್ಯೆ 1,57,248ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ: ಕೊರೊನಾಗೆ ಬಲಿಯಾದವರ ಸಂಖ್ಯೆ 1,57,248ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,286 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 91 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,248ಕ್ಕೆ ಏರಿಕೆಯಾಗಿದೆ.

ಸಾಲದ ನಿರೀಕ್ಷೆಯಲ್ಲಿದ್ದ ಬಡವರಿಗೆ ಮತ್ತೊಂದು ‘ಶಾಕಿಂಗ್’ ಸುದ್ದಿ

ಇನ್ನು ದೇಶದಲ್ಲಿ 1,68,358 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,98,921 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 12,464 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,59,283 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು ದೇಶದಲ್ಲಿ ಈವರೆಗೆ 21,76,18,057 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 1,43,01,266 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...