alex Certify ಒಂದೇ ದಿನದಲ್ಲಿ 69,921 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 69,921 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಇಂದಿನಿಂದ ಅನ್ ಲಾಕ್ ಪ್ರಕ್ರಿಯೆ 4.0 ಆರಂಭವಾಗಿದ್ದು, ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 69,921 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ 819 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 65,288ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 7,85,996 ಸಕ್ರಿಯ ಪ್ರಕರಣಗಳು ಇದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 28,39,883 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...