alex Certify ಒಂದೇ ದಿನದಲ್ಲಿ 81 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ: 99,773ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 81 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ: 99,773ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 81,484 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ 24 ಗಂಟೆಯಲ್ಲಿ 1,095 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 99,773ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,42,217 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 53,52,078 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 10,97,947 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 7,67,17,728 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಐ ಸಿ ಎಂ ಆರ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...