alex Certify ಒಂದೇ ದಿನ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲು

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ದಾಖಲೆ ಮಟ್ಟದಲ್ಲಿ ಹೆಚ್ಚಾಗ್ತಿದೆ. ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರ, ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳಲ್ಲಿ, 45,720 ಹೊಸ ರೋಗಿಗಳು ಕಂಡುಬಂದಿದ್ದಾರೆ. 1129 ರೋಗಿಗಳು ಸಾವನ್ನಪ್ಪಿದ್ದಾರೆ.

ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ 12 ಲಕ್ಷ 38 ಸಾವಿರ 635 ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 4 ಲಕ್ಷ 26 ಸಾವಿರ 167 ಸಕ್ರಿಯ ಪ್ರಕರಣಗಳಿವೆ. ಈವರೆಗೆ 29,861 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, 7,82,606 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬುಧವಾರ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪುಣೆಯಲ್ಲಿ ಅತಿ ಹೆಚ್ಚು 3606 ಪ್ರಕರಣಗಳಿದ್ದರೆ, ಮುಂಬೈಯಲ್ಲಿ 1310 ಹೊಸ ಪ್ರಕರಣಗಳಿವೆ. ಅರುಣಾಚಲ ಪ್ರದೇಶದಲ್ಲಿ ಇದುವರೆಗೆ 167 ಭದ್ರತಾ ಪಡೆಗಳ ಸಿಬ್ಬಂದಿ ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...