ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,133 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 10,10,824 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 43,03,044 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 12,06,806 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,36,61,060 ಜನರಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.