alex Certify ಒಂದೇ ದಿನ 1,133 ಜನ ಮಹಾಮಾರಿಗೆ ಬಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ 1,133 ಜನ ಮಹಾಮಾರಿಗೆ ಬಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,133 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 10,10,824 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 43,03,044 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 12,06,806 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,36,61,060 ಜನರಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...