alex Certify ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 96,424 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 52,14,678 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,174 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 84,372ಕ್ಕೆ ಏರಿಕೆಯಾಗಿದೆ.

ನಿನ್ನೆ 10,06,615 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,15,72,343 ಜನರಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ 10,17,754 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 41,12,552 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...