alex Certify ಕಳೆದ 24 ಗಂಟೆಯಲ್ಲಿ ದೇಶದ 54 ಸಾವಿರ ಮಂದಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದ 24 ಗಂಟೆಯಲ್ಲಿ ದೇಶದ 54 ಸಾವಿರ ಮಂದಿಗೆ ಕೊರೊನಾ ಸೋಂಕು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ 54,044 ಏರಿಕೆ ಕಾಣುವ ಮೂಲಕ ಭಾರತ ಒಟ್ಟು ಕರೊನಾ ಕೇಸ್​​ 76.5 ಲಕ್ಷದಷ್ಟಾಗಿದೆ. ಅಲ್ಲದೇ ಕೋವಿಡ್​ ಸೋಂಕಿಗೆ ಒಂದೇ ದಿನದಲ್ಲಿ 717 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕರೊನಾದಿಂದ ಸಾವಿಗೀಡಾದವರ ಸಂಖ್ಯೆ 1,15,914ಕ್ಕೆ ಏರಿಕೆ ಕಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 61,775 ಮಂದಿ ಕರೊನಾ ಜಯಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಕರೊನಾದಿಂದ ಗುಣಮುಖರಾದವರ ಸಂಖ್ಯೆ 61.75 ಲಕ್ಷದಷ್ಟಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಕರೊನಾ ಗುಣಮುಖರನ್ನ ಹೊಂದಿರುವ ರಾಷ್ಟ್ರ ಭಾರತವಾಗಿದೆ.

ಪ್ರಸ್ತುತ ಭಾರತದಲ್ಲಿ 7,40,090 ಸಕ್ರಿಯ ಕರೊನಾ ಪ್ರಕರಣಗಳಿವೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕರೊನಾ ರಿಕವರಿ ರೇಟ್​ 88.8 ಪ್ರತಿಶತದಷ್ಟಾಗಿದೆ. ಕಳೆದ 24 ಗಂಟೆಯಲ್ಲಿ 10.8 ಲಕ್ಷ ಸ್ಯಾಂಪಲ್ಸ್​ ಟೆಸ್ಟ್ ಮಾಡಲಾಗಿದೆ. ಈ ಮೂಲಕ ಟೆಸ್ಟಿಂಗ್​ ರೇಟಿಂಗ್​ನಲ್ಲೀ ಭಾರತ ವಿಶ್ವದಲ್ಲೇ 2ನೇ ಸ್ಥಾನ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...