ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ವಿಪಕ್ಷಗಳು ರೈತರ ಹೋರಾಟವನ್ನು ಬೆಂಬಲಿಸಿದ್ದರೆ ಆಡಳಿತರೂಢ ಬಿಜೆಪಿ ಹೊಸ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡಿದೆ.
ಇದರ ಮಧ್ಯೆ ಪಶ್ಚಿಮ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಆಯೋಜಿಸಲಾಗಿದ್ದ ಕಿಸಾನ್ ಪಂಚಾಯಿತ್ ರಾಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್…!
ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಪ್ರತಿಭಟನಾ ನಿರತ ರೈತರನ್ನು ಅವಮಾನಿಸುತ್ತಿದ್ದಾರೆ. ನೂತನ ಕೃಷಿ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇದನ್ನು ರದ್ದುಗೊಳಿಸುತ್ತದೆ ಎಂದು ಹೇಳಿದ್ದಾರೆ.