alex Certify ಕಾಂಗ್ರೆಸ್ ಅಧಿಕಾರದಲ್ಲಿದ್ದರೆ 15 ನಿಮಿಷದಲ್ಲಿ ಕಾಲ್ಕೀಳುತ್ತಿತ್ತಂತೆ ಚೀನಾ ಸೇನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ 15 ನಿಮಿಷದಲ್ಲಿ ಕಾಲ್ಕೀಳುತ್ತಿತ್ತಂತೆ ಚೀನಾ ಸೇನೆ

ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿಯ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೀನಾ ಸೇನೆಯ ವಿಚಾರವಾಗಿ ಮಾತನಾಡಿರುವ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರದಲ್ಲಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳುವ ಮೂಲಕ ಮೋದಿಯನ್ನು ಕುಟುಕಿದ್ದಾರೆ.

ಹರಿಯಾಣದ ಕುರುಕ್ಷೇತ್ರದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ನಾವು ಅಧಿಕಾರದಲ್ಲಿ ಇದ್ದಿದ್ದರೆ ಚೀನಾ ಸೇನೆ ಹಿಮ್ಮೆಟ್ಟಿಸಲು 15 ನಿಮಿಷ ಸಾಕಾಗಿತ್ತು. ಆದರೆ ಬಿಜೆಪಿಯಿಂದ ಸೈನ್ಯವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗುತ್ತಿಲ್ಲ. ನಾನು ದೇಶ ಭಕ್ತ ಎಂದು ಹೇಳಿಕೊಳ್ಳುವ ಮೋದಿಯವರು ಏನು ಮಾಡುತ್ತಿದ್ದಾರೆ. ಯಾವ ರೀತಿಯಲ್ಲಿ ತಮ್ಮನ್ನು ತಾವು ದೇಶ ಭಕ್ತ ಎಂದುಕೊಂಡಿದ್ದಾರೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ನಾವು ಅಧಿಕಾರದಲ್ಲಿದ್ದಾಗ ಚೀನಾ ಸೈನ್ಯ ಭಾರತದ ಪ್ರದೇಶಕ್ಕೆ ಕಾಲಿಡಲು ಎದರುತ್ತಿತ್ತು. ಚೀನಾ ಸೈನ್ಯ ನಮ್ಮ ದೇಶದ 1200 ಚದರ ಕಿಲೋ ಮೀಟರ್ ಪ್ರದೇಶವನ್ನು ಆಕ್ರಮಿಸಿದೆ. ಇದನ್ನು ಮೋದಿಯವರಾಗಲಿ ಅಥವಾ ಬಿಜೆಪಿಯವರಾಗಲಿ ಒಪ್ಪುತ್ತಿಲ್ಲ. ಆದರೆ ಇದು ಎಲ್ಲರಿಗೂ ಗೊತ್ತಿರುವ ವಿಚಾರ. ತಮ್ಮ ದೇಶದ ಭೂ ಪ್ರದೇಶ ಆಕ್ರಮಿತವಾಗಿರುವುದು ಅವರಿಗೆ ಗೊತ್ತೇ ಇದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...