alex Certify ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ಬೆಂಬಲಿಸಿ ಅಚ್ಚರಿ ಮೂಡಿಸಿದ ಕಾಂಗ್ರೆಸ್ ನಾಯಕಿ ಖುಷ್ಬೂ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ಬೆಂಬಲಿಸಿ ಅಚ್ಚರಿ ಮೂಡಿಸಿದ ಕಾಂಗ್ರೆಸ್ ನಾಯಕಿ ಖುಷ್ಬೂ..!

ಕೇಂದ್ರ ಸರ್ಕಾರ, ನೂತನ ಶಿಕ್ಷಣ ನೀತಿ 2020 ಅನ್ನು ಘೋಷಣೆ ಮಾಡಿದೆ. ಇದರ ಪ್ರಕಾರ ಐದನೆಯ ತರಗತಿ ತನಕ ವಿದ್ಯಾರ್ಥಿಗಳು ಶಿಕ್ಷಣವನ್ನು ತಮ್ಮ ಮಾತೃಭಾಷೆಯಲ್ಲೇ ಪಡೆಯಬಹುದಾಗಿದೆ. ಈ ಶಿಕ್ಷಣ ನೀತಿಗೆ ಹಲವಾರು ಮಂದಿ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದೀಗ ಅಚ್ಚರಿ ಎಂಬಂತೆ ಕಾಂಗ್ರೆಸ್ ನಾಯಕಿ ಖುಷ್ಬೂ ನೂತನ ಶಿಕ್ಷಣ ನೀತಿಯನ್ನು ಬೆಂಬಲಿಸಿದ್ದಾರೆ.

ದೇಶದ ನಾಗರೀಕಳಾಗಿ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಸ್ವಾಗತ ಮಾಡುತ್ತೇನೆ ಎಂದು ಟ್ವಿಟ್ ಮಾಡಿರುವ ಅವರು, ನಾನು ರಾಹುಲ್ ಗಾಂಧಿಯವರಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದೂ ಹೇಳಿದ್ದಾರೆ. ಎಲ್ಲಾ ವಿಚಾರಗಳನ್ನು ಒಪ್ಪಿಕೊಳ್ಳುವ ಬದಲು ಸತ್ಯಗಳ ಬಗ್ಗೆ ಮಾತನಾಡಬೇಕಿದೆ. ನಮ್ಮ ನಾಯಕರ ನಿಲುವಿನಂತೆ ನಿಲ್ಲುವುದರ ಜೊತೆಗೆ ನಮ್ಮ ಅಭಿಪ್ರಾಯಗಳನ್ನು ಹೇಳಬೇಕಿದೆ ಎಂದು ಟ್ವಿಟ್ ಮಾಡಿದ್ದಾರೆ.

ಇವರ ಈ ಟ್ವಿಟ್ ಹಾಗೂ ಶಿಕ್ಷಣ ನೀತಿ ಸ್ವಾಗತಕ್ಕೆ ಹಲವಾರು ಮಂದಿ ಕಾಂಗ್ರೆಸ್ಸಿಗರು ಟೀಕೆ ಮಾಡಿದ್ದಾರೆ. ಇನ್ನು ಇದರ ಬೆನ್ನಲ್ಲೇ ಮತ್ತೊಂದು ಟ್ವಿಟ್ ಮಾಡಿರುವ ಅವರು, ಎಲ್ಲವನ್ನೂ ಸರಿ ಎಂದು ಹೇಳಲು ಆಗುವುದಿಲ್ಲ. ವಿರೋಧ ಪಕ್ಷದವರಾಗಿ ಸರ್ಕಾರದ ನ್ಯೂನ್ಯತೆಗಳ ಬಗ್ಗೆಯೂ ಮಾತನಾಡಬೇಕಿದೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...