alex Certify ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಲಾಕ್ ಡೌನ್ ನಿಂದಾಗಿ ಈಗಾಗಲೇ ಅನೇಕ ಕಂಪನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಹೇಳಿವೆ. ಕೇಂದ್ರ ಸರ್ಕಾರ ಕೂಡ ತನ್ನ ನೌಕರರಿಗೆ ವರ್ಕ್ ಫ್ರಂ ಹೋಂ ಮಾಡಲು ಅನುಮತಿ ನೀಡಿತ್ತು. ಇದೀಗ ಅದನ್ನು ಬದಲಾವಣೆ ಮಾಡಲು ನಿರ್ಧರಿಸಿದೆ. ಮೂರು ಶಿಫ್ಟ್ ನಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಹೌದು, ವರ್ಕ್ ಫ್ರಂ ಹೋಮ್ ವ್ಯವಸ್ಥೆ ಇರದ ಕಡೆ ನೌಕರರು ಕಚೇರಿಗೆ ಬರುವಂತೆ ಸೂಚಿಸಿದೆ. ಆದರೆ ಒಟ್ಟೊಟ್ಟಿಗೆ ನೌಕರರು ಬಂದರೆ ಸಾಮಾಜಿಕ‌ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಇದೀಗ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡಿಸಲು ತೀರ್ಮಾನ ಮಾಡಿದೆ ಕೇಂದ್ರ.

ಇನ್ನು ನೌಕರರು ಹಾಜರಾಗಿರುವ ಬಗ್ಗೆ ಹಾಜರಾತಿ ಹಾಕಬೇಕಾಗಿದೆ. ಇನ್ನು ವರ್ಕ್ ಫ್ರಂ ಹೋಮ್ ನಲ್ಲಿ ಇರುವ ನೌಕರರು ಕಡ್ಡಾಯವಾಗಿ ಫೋನ್ ಆನ್ ನಲ್ಲಿ ಇಟ್ಟುಕೊಂಡಿರಬೇಕು ಎಂದು ಕೇಂದ್ರ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...