ಕೇರಳದ ಕೋಯಿಕ್ಕೋಡ್ ನಲ್ಲಿ ನಲ್ಲಿ ಶುಕ್ರವಾರ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಹದಿನೆಂಟು ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ಹಿಂದಿನ ಕಾರಣವನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ಇದು ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಇದರ ಮಧ್ಯೆ ದುರಂತಕ್ಕೀಡಾದ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನ ರನ್ ವೇ ಗಿಂತಲೂ ಸಾವಿರ ಮೀಟರ್ ಮೊದಲೇ ಟ್ಯಾಕ್ಸಿ ವೇ ನಲ್ಲಿ ಭೂ ಸ್ಪರ್ಶ ಮಾಡಿದೆ ಎಂಬ ಸಂಗತಿ ಈಗ ಬಹಿರಂಗವಾಗಿದೆ.
ಅಪಘಾತಕ್ಕೆ ಮೊದಲು ಪೈಲೆಟ್ 28ನೇ ರನ್ ವೇ ನಲ್ಲಿ ಲ್ಯಾಂಡಿಂಗ್ ಮಾಡಲು ಯತ್ನಿಸಿದ್ದು, ಭಾರೀ ಮಳೆಯಿಂದ ನೋಟ ಮಸುಕಾಗಿದ್ದ ಕಾರಣ ಇದು ಸಾಧ್ಯವಾಗಿರಲಿಲ್ಲ. ಬಳಿಕ 10ನೇ ರನ್ ವೇ ನಲ್ಲಿ ಲ್ಯಾಂಡಿಂಗ್ ಮಾಡಲು ಅವಕಾಶ ಕೋರಿದ್ದರು ಎಂದು ಹೇಳಲಾಗಿದೆ. ಅನುಮತಿ ಸಿಕ್ಕ ಬಳಿಕ ಲ್ಯಾಂಡಿಂಗ್ ಮಾಡುವ ವೇಳೆ ಈ ದುರಂತ ಸಂಭವಿಸಿದೆ.