ಭಾರತದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಈಗಾಗಲೇ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. 29 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಈ ಮಹಾಮಾರಿ ತೊಲಗುವುದು ಯಾವಾಗ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ.
ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಎಲ್ಲಾ ರಾಷ್ಟ್ರಗಳು ನಿರಂತರ ಪ್ರಯತ್ನ ನಡೆಸಿದ್ದು, ಈ ವಿಚಾರದಲ್ಲಿ ರಷ್ಯಾ ಸಾಕಷ್ಟು ಯಶಸ್ಸು ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಭಾರತದಲ್ಲಿನ ಸೋಂಕು ಹರಡುವಿಕೆ ಕುರಿತು ಮಹತ್ವದ ಮಾಹಿತಿ ಬಹಿರಂಗವಾಗಿದೆ.
ಮುಂದಿನ ಎರಡು ವಾರಗಳಲ್ಲಿ ಕೊರೊನಾ ದೇಶದಲ್ಲಿ ಗರಿಷ್ಠ ಮಟ್ಟ ತಲುಪಲಿದೆ ಎನ್ನಲಾಗಿದ್ದು, ಆ ಬಳಿಕ ಸೋಂಕಿನ ಪ್ರಮಾಣ ಇಳಿಕೆಯಾಗಲಿದೆ ಎನ್ನಲಾಗಿದೆ. ಡಿಸೆಂಬರ್ ವೇಳೆಗೆ ಭಾರತದಲ್ಲಿ ಕೊರೊನಾ ಅಂತ್ಯಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ವರದಿಯಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.