alex Certify ಕೊರೊನಾ ಕಾರಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ’ಅನ್ನಾತೆ’ ಚಿತ್ರದ ಶೂಟಿಂಗ್ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಕಾರಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ’ಅನ್ನಾತೆ’ ಚಿತ್ರದ ಶೂಟಿಂಗ್ ಸ್ಥಗಿತ

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ’ಅನ್ನಾತೆ’ ಚಿತ್ರದ ಶೂಟಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಹೀಗಾಗಿ ರಜನಿಕಾಂತ್ ಹೈದರಾಬಾದ್ ನಿಂದ ಚೆನ್ನೈಗೆ ವಾಪಸ್ ಆಗಿದ್ದಾರೆ.

ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅನ್ನಾತೆ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ನಟ ರಜನಿಕಾಂತ್ ಕೂಡ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಆದರೆ ಇದೀಗ ಅನ್ನಾತೆ ಶೂಟಿಂಗ್ ಸೆಟ್ ನಲ್ಲಿ 8 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಶಿವಾ ನಿರ್ದೇಶನದಲ್ಲಿ ಮೂಡಿಬರುತ್ತಿರುವ ರಜನಿಕಾಂತ್ ಅವರ ’ಅನ್ನಾತೆ’ ಚಿತ್ರದಲ್ಲಿ ಮೀನಾ, ಖುಷ್ಬೂ, ಕೀರ್ತಿ ಸುರೇಶ್, ನಯನತಾರಾ, ಪ್ರಕಾಶ್ ರಾಜ್ ಸೇರಿದಂತೆ ಹಲವು ಖ್ಯಾತನಾಮರು ಅಭಿನಯಿಸುತ್ತಿದ್ದು, ರಜನಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...