ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಪ್ರಕರಣ ಭಾರತದಲ್ಲಿ ದಾಖಲಾಗಿದೆ. ಆದ್ರೆ ಇಷ್ಟರ ಮಧ್ಯೆಯೂ ಭಾರತೀಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಕೊರೊನಾ ಗೆಲ್ಲೋದ್ರಲ್ಲಿ ಭಾರತೀಯರು ಮುಂದಿದ್ದಾರೆ.
ಈ ಕಾಯಿಲೆಯಿಂದ ಗುಣಮುಖರಾದವರ ಸಂಖ್ಯೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಜನರಿಗಿಂತ 18 ಲಕ್ಷ ಹೆಚ್ಚಾಗಿದೆ ಎಂದು ಸರ್ಕಾರ ಉಲ್ಲೇಖಿಸಿದೆ. ಕಳೆದ ಐದು ತಿಂಗಳಲ್ಲಿ ಕೋವಿಡ್ -19 ರೋಗಿಗಳಲ್ಲಿ ಮೂರರಲ್ಲಿ ನಾಲ್ಕು ಭಾಗದಷ್ಟು ಜನರು ಚೇತರಿಸಿಕೊಂಡಿದ್ದಾರೆ. ಈಗ ನಾಲ್ಕನೇ ಒಂದು ಭಾಗಕ್ಕಿಂತ ಕಡಿಮೆ ಜನರು ಬಾಧಿತರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕಿತರಿಗೆ ಪರಿಣಾಮಕಾರಿಯಾಗಿ ಚಿಕಿತ್ಸೆ ಸಿಗ್ತಿರುವುದ್ರಿಂದ ಕೋವಿಡ್ ಪ್ರಕರಣಗಳಲ್ಲಿ ಮರಣ ಪ್ರಮಾಣ ಕಡಿಮೆಯಾಗಿದೆ. ಇದು ಪ್ರಸ್ತುತ ಶೇಕಡಾ 1.82 ರಷ್ಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಚೇತರಿಸಿಕೊಳ್ಳುವ ಜನರ ಸಂಖ್ಯೆ ಕೊರೊನಾ ವೈರಸ್ ಗೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವವರಿಗಿಂತ ಶೇಕಡಾ 3.5 ಪಟ್ಟು ಹೆಚ್ಚಾಗಿದೆ.
ಭಾರತದಲ್ಲಿ ಕೋವಿಡ್ -19 ನಿಂದ ಚೇತರಿಸಿಕೊಳ್ಳುವವರ ಸಂಖ್ಯೆ 26 ಲಕ್ಷಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 60,177 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದ್ರ ನಂತ್ರ ಚೇತರಿಕೆಯ ಸಂಖ್ಯೆ 25,83,948 ಕ್ಕೆ ಏರಿದೆ ಮತ್ತು ಚೇತರಿಕೆಯ ಪ್ರಮಾಣವು ಶೇಕಡಾ 76.28 ರಷ್ಟಿದೆ.