ದೇಶದಾದ್ಯಂತ ಕೊರೊನಾ ಲಸಿಕೆ ನೀಡುವ ಅಭಿಯಾನ ನಡೆಯುತ್ತಿದ್ದು, ಈಗ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದರ ಮಧ್ಯೆ ಕೋವಿಡ್ ಲಸಿಕೆಯನ್ನು 2 ಡೋಸ್ ಪಡೆದ ಬೆರಳೆಣಿಕೆಯಷ್ಟು ಮಂದಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಕೆಲವರು ಲಸಿಕೆಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿದ್ದಾರೆ.
ಇದರ ಮಧ್ಯೆ ಕೊರೊನಾ ಲಸಿಕೆ ಕುರಿತು ಆರೋಗ್ಯ ತಜ್ಞರು ಮಹತ್ವದ ಮಾಹಿತಿ ನೀಡಿದ್ದು, ಲಸಿಕೆ ಸೋಂಕಿನ ತೀವ್ರತೆಯನ್ನು ಮತ್ತು ಮರಣ ಪ್ರಮಾಣವನ್ನು ತಗ್ಗಿಸುತ್ತದೆ. ಅಲ್ಲದೆ ಲಸಿಕೆ 2 ಡೋಸ್ ತೆಗೆದುಕೊಂಡು ಕನಿಷ್ಠ ನಾಲ್ಕು ವಾರದ ಬಳಿಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಖಾತೆಗೆ ತಲಾ 1100 ರೂ. ಜಮಾ; ಸಮವಸ್ತ್ರ, ಶೂ, ಬ್ಯಾಗ್ ಖರೀದಿಗೆ ಉತ್ತರಪ್ರದೇಶ ಸರ್ಕಾರದಿಂದ ಪಾವತಿ
ಹೀಗಾಗಿ ಲಸಿಕೆ ಪಡೆದುಕೊಂಡ ಬಳಿಕ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೆ ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.