ಕೊರೊನಾ ಸಾರ್ವಜನಿಕರ ಬದುಕನ್ನು ಹೈರಾಣಾಗಿಸಿದೆ. ಇದು ವ್ಯಾಪಿಸುವ ಪರಿಗೆ ಕಂಗಾಲಾಗಿರುವ ಜನ ಹೆದರಿಕೊಂಡೇ ಜೀವನ ಸಾಗಿಸುವಂತಾಗಿದೆ. ಈ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರ ಪ್ರಯತ್ನ ನಡೆಸಿದ್ದು, ಇದು ಯಶಸ್ವಿಯಾಗುವ ಸೂಚನೆಗಳು ಕಾಣಿಸುತ್ತಿವೆ.
ಲಂಡನ್ ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಲಸಿಕೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದ್ದು, ಅಲ್ಲದೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ದೇಸಿ ಲಸಿಕೆ ಕೋ ವ್ಯಾಕ್ಸಿನ್ ಕೂಡ ಮುಂದಿನ ದಿನಗಳಲ್ಲಿ ಬಳಕೆಗೆ ಲಭ್ಯವಾಗುತ್ತಿದೆ.
ಇದರ ಜೊತೆಗೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಎಂಬ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದ್ದು, ಡಿಸೆಂಬರ್ ವೇಳೆಗೆ ಇದು ಭಾರತದಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಕೊರೊನಾ ಲಸಿಕೆಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ವಿಶ್ವದ ಜನತೆಗೆ ಕೆಲವೇ ದಿನಗಳಲ್ಲಿ ಶುಭಸುದ್ದಿ ದೊರೆಯುವ ನಿರೀಕ್ಷೆ ಇದೆ.